ರಾಷ್ಟ್ರೀಯ ಸುದ್ದಿ

ಬಿಜೆಪಿ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ; ಸಂಘರ್ಷಕ್ಕೆ ತಿರುಗಿದ ಪ್ರತಿಭಟನೆ  

ನಾಳೆ ತಿರುವಂತಪುರಂ ಬಂದ್ ಗೆ ಬಿಜೆಪಿ ಕರೆ

ವರದಿಗಾರ (ಡಿ.10): ಶಬರಿಮಲೆಯಲ್ಲಿ ನಿಷೇಧಾಜ್ಞೆ ಹಿಂಪಡೆಯಬೇಕು ಎಂದು ಕೇರಳ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎನ್ ರಾಧಾಕೃಷ್ಣನ್ ಅವರು ಕಳೆದ ಎಂಟು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಇಂದು ಕೇರಳ ವಿಧಾನ ಸೌಧಕ್ಕೆ ಬಿಜೆಪಿ, ಯುವಮೋರ್ಚಾ ಕಾರ್ಯಕರ್ತರು ತಿರುವಂತಪುರಂ ನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ.

ರಾಧಾಕೃಷ್ಣನ್ ಅವರ ಜೀವ ಉಳಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಂದು ಈ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆಯು ತೀವ್ರ ಸ್ವರೂಪವನ್ನು ಪಡೆದು ಸಂಘರ್ಷಕ್ಕೆ ಎಡೆಮಾಡಿದೆ.

ಪ್ರತಿಭಟನೆ ನಡೆಯುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ಪಡೆ ಮೇಲೆ ಕಲ್ಲು ತೂರಾಟ ಮಾಡಿದ್ದು ಈ ಸಂದರ್ಭ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಆ ವೇಳೆ ಅಲ್ಲಿಂದ ಚದುರಿ ಓಡಿದ ಬಿಜೆಪಿ ಕಾರ್ಯಕರ್ತರು ಪೊಲೀಸರ ಕ್ರಮ ವಿರೋಧಿಸಿ ಮತ್ತೊಮ್ಮೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರ ವಿರುದ್ಧ  ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು  ರಸ್ತೆಗೆ ತಡೆಯೊಡ್ಡಿದ್ದಾರೆ. ಪೊಲೀಸರ ವಿರುದ್ಧ ನಡೆದ ಕಲ್ಲು ತೂರಾಟದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಹಿಳೆಯರಿಗೂ ಗಾಯಗಳಾಗಿವೆ ಎಂದು ಮಾತೃಭೂಮಿ ಪತ್ರಿಕೆ ವರದಿ ಮಾಡಿವೆ.
ಸಂಘರ್ಷದ ಭಾಗವಾಗಿ ನಾಳೆ ತಿರುವನಂತಪುರಂ ಜಿಲ್ಲೆಯಲ್ಲಿ ಬಂದ್‍ ಗೆ ರಾಜ್ಯ ಬಿಜೆಪಿ ಕರೆ ನೀಡಿದೆ.

ബി ജെ പി യുടെ സെക്രട്ടേറിയറ്റ് മാർച്ചിൽ സംഘർഷം – തത്സമയം

ബി ജെ പി യുടെ സെക്രട്ടേറിയറ്റ് മാർച്ചിൽ സംഘർഷം – തത്സമയം

Posted by Mathrubhumi on Sunday, 9 December 2018

ബി ജെ പി യുടെ സെക്രട്ടേറിയറ്റ് മാർച്ചിൽ സംഘർഷം – തത്സമയം

ബി ജെ പി യുടെ സെക്രട്ടേറിയറ്റ് മാർച്ചിൽ സംഘർഷം – തത്സമയം

Posted by Mathrubhumi on Sunday, 9 December 2018

ಬಿಜೆಪಿ ನಡೆಸಿದ ಪ್ರತಿಭಟನೆ

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group