ರಾಷ್ಟ್ರೀಯ ಸುದ್ದಿ

ಶೈಕ್ಷಣಿಕ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಆಂಧ್ರ ಪೊಲೀಸರ ದೌರ್ಜನ್ಯಕ್ಕೆ ಪಾಪ್ಯುಲರ್ ಫ್ರಂಟ್ ತೀವ್ರ ಖಂಡನೆ

ನವದೆಹಲಿ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಂಧ್ರಪ್ರದೇಶದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭಕ್ಕೆ ಅಡ್ಡಿಪಡಿಸಿದ ಮತ್ತು ಸಂಘಟನೆಯ ವಲಯ ಕಾರ್ಯದರ್ಶಿ ಮತ್ತು ಜಿಲ್ಲಾ ನಾಯಕರನ್ನು ಸುಳ್ಳು ಆರೋಪದಲ್ಲಿ ಕಾನೂನುಬಾಹಿರವಾಗಿ ಬಂಧಿಸಿ, ಕಿರುಕುಳ ನೀಡಿರುವ ಕೆಲವು ಪೊಲೀಸರ ಕೃತ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ  ಎಂ.ಮುಹಮ್ಮದ್ ಅಲಿ ಜಿನ್ನಾ ತೀವ್ರವಾಗಿ ಖಂಡಿಸಿದ್ದಾರೆ.

ರಾಜ್ಯದಲ್ಲಿ ನಡೆದ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆಯ ಈ ಪ್ರಕರಣವನ್ನು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಅವರು ಗಂಭೀರವಾಗಿ ಪರಿಗಣಿಸಿ, ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು
ಜಿಲ್ಲೆಯ ಪುಂಗನೂರು ಎಂಬಲ್ಲಿ ಇಂದು ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಕ್ರಮವೊಂದರಲ್ಲಿ ಪೊಲೀಸರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಮಾಯಕ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಮೇಲೆ ದೌರ್ಜನ್ಯವೆಸಗಿದ್ದಾರೆ.

ಪುಂಗನೂರಿನ ಸುಮಯ್ಯಾ ಸಭಾಂಗಣದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದೊಂದಿಗೆ ಫಲಾನುಭವಿ ವಿದ್ಯಾರ್ಥಿಗಳಿಗೆ ವಿಭಿನ್ನ ಪ್ರೇರಣಾ, ಮಾರ್ಗದರ್ಶನ ಮತ್ತು ಕೌಶಲ್ಯ ಅಭಿವೃದ್ಧಿ ತರಗತಿಗಳೊಂದಿಗೆ ಪೂರ್ಣ ಒಂದು ದಿನದ ಸಮಾರಂಭ ಏರ್ಪಡಿಸಲಾಗಿತ್ತು.

ಕಾರ್ಯಕ್ರಮ ನಡೆಯುತ್ತಿದ್ದಾಗ ಪುಂಗನೂರು ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಮತ್ತು ಹೆಡ್ ಕಾನ್‍ಸ್ಟೆಬಲ್ ಆಗಮಿಸಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಅಲ್ಲಿ ಪಾಲ್ಗೊಂಡವರ ಫೋಟೋಗಳನ್ನು ತೆಗೆಯುವ ಮೂಲಕ ಬೆದರಿಸಿದ್ದಾರೆ. ಇದೊಂದು ಸಾರ್ವಜನಿಕ ಸಮಾರಂಭವಾಗಿದ್ದು, ತಾವೇ ತೆಗೆದ ಫೋಟೋಗಳನ್ನು ನೀಡುವುದಾಗಿ ಹೇಳಿದ ಕಾರ್ಯಕ್ರಮ ಸಂಘಟಕರು, ಕೆಲವು ಪೋಟೋಗಳನ್ನು ಅವರಿಗೆ ನೀಡಿದ್ದಾರೆ. ಪ್ರಕರಣ ಅಲ್ಲಿಗೆ ಮುಕ್ತಾಯ ಕಂಡರೂ ಅಧಿಕಾರಿಗಳು ಮಾತ್ರ ಅದನ್ನು ಮುಗಿಸಲು ಸಿದ್ಧವಿರಲಿಲ್ಲ. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಅಲ್ಲಿಗೆ ಬಂದ ಪೊಲೀಸರು ಸಭಾಂಗಣ ವ್ಯವಸ್ಥೆಯನ್ನು ಹಾಳುಗೆಡವಿ, ಅಮಾಯಕರನ್ನು ಬಂಧಿಸಿರುವುದು ವಿದ್ಯಾರ್ಥಿಗಳು ಮತ್ತು ಸಂಘಟಕರಿಗೆ ಆಶ್ಚರ್ಯ ಉಂಟು ಮಾಡಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಝೋನಲ್ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಅಹ್ಮದ್ ಮತ್ತು ಪಾಪ್ಯುಲರ್ ಫ್ರಂಟ್‍ನ ಪುಂಗನೂರು ಜಿಲ್ಲಾ ಅಧ್ಯಕ್ಷ ಫಯಾಝ್ ಅಹ್ಮದ್ ಮತ್ತಿತರರನ್ನು ಬಂಧಿಸಲಾಗಿದೆ. ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸುಳ್ಳು ಆರೋಪದಲ್ಲಿ ಅವರು ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿರುವಂತೆ ಮಾಡಲಾಗಿದೆ.

ವಿದ್ಯಾರ್ಥಿ ವೇತನ ವಿತರಣೆ ಪಾಪ್ಯುಲರ್ ಫ್ರಂಟ್ ದೇಶಾದ್ಯಂತ ನಡೆಸುವ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಒಂದು ದಶಕದಿಂದಲೂ ಈ ಕಾರ್ಯಕ್ರಮವನ್ನು ನಡೆಸುತ್ತಾ ಬರಲಾಗುತ್ತಿದೆ. ಮುಸ್ಲಿಮರು ಮತ್ತು ಇತರ ಅವಕಾಶ ವಂಚಿತ ವರ್ಗದವರು ಸೇರಿದಂತೆ ಸಾವಿರಾರು ಬಡ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದಿದ್ದಾರೆ. ಶೈಕ್ಷಣಿಕ ಕಾರ್ಯಕ್ರಮವೊಂದರ ಮೇಲೆ ಈ ರೀತಿಯ ಪೊಲೀಸ್ ಗೂಂಡಾಗಿರಿ, ದೇಶದಲ್ಲಿ ಹಿಂದುಳಿದ ವರ್ಗದವರು ಶೈಕ್ಷಣಿಕವಾಗಿ ಸಬಲೀಕರಣಗೊಳ್ಳಲು ನಡೆಸುತ್ತಿರುವ ಪ್ರಯತ್ನದ ಮೇಲಿನ ದಾಳಿ ಎಂದೇ ಹೇಳಬೇಕಾಗುತ್ತದೆ.

ನಾಗರಿಕ ಸಮಾಜಕ್ಕೆ ಮತ್ತು ಜಾತ್ಯತೀತ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುತ್ತೇವೆ ಎಂದು ಹೇಳುವ ಸರ್ಕಾರಕ್ಕೆ ಇದೊಂದು ನಾಚಿಕೆಗೇಡಿನ ವಿಷಯವಾಗಿದೆ. ಈ ದೌರ್ಜನ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಚಂದ್ರಬಾಬು ನಾಯ್ಡು ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಮತ್ತು ಬಂಧಿಸಲ್ಪಟ್ಟಿರುವ ನಾಲ್ವರು ಅಮಾಯಕರನ್ನು ಬೇಷರತ್ ಬಿಡುಗಡೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ಪೊಲೀಸರ ಇಂತಹ ದೌರ್ಜನ್ಯಗಳ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಪ್ರಜಾಪ್ರಭುತ್ವ ಮತ್ತು ಕಾನೂನು ರೀತಿಯಲ್ಲಿ ಹೋರಾಟ ಮುಂದುವರಿಸಲಿದೆ. ಈ ಪೊಲೀಸ್ ದೌರ್ಜನ್ಯದ ವಿರುದ್ಧ ನಾಗರಿಕ ಸಮಾಜ ಕೂಡ ಧ್ವನಿ ಎತ್ತಬೇಕು ಎಂದು ನಾವು ಮನವಿ ಮಾಡುತ್ತಿದ್ದೇವೆ  ಎಂದು ಪಾಪ್ಯುಲರ್ ಫ್ರಂಟ್ ನ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕದ ರಾಷ್ಟ್ರೀಯ ನಿರ್ದೇಶಕರಾಗಿರುವ ಡಾ. ಮುಹಮ್ಮದ್ ಶಮೂನ್ ರವರು ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group