ವರದಿಗಾರ (ಡಿ 23) : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ತಾಲೂಕು ಪ್ರತಿನಿಧಿ ಸಮಾವೇಶ ದಿನಾಂಕ : 22-12-2018 ರಂದು ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಅಧ್ಯಕ್ಷರಾದ ಸವಾದ್ ಕಲ್ಲರ್ಪೆ ಧ್ವಜಾರೋಹಣ ನೆರವೇರಿಸುವ ಮೂಲಕ ಪ್ರತಿನಿಧಿ ಸಮಾವೇಶವನ್ನು ಉದ್ಘಾಟಿಸಿದರು. ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿಯ ಎರಡು ವರ್ಷಗಳ ವರದಿಯನ್ನು ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಕಾರ್ಯದರ್ಶಿ ರಿಯಾಝ್ ಅಂಕತ್ತಡ್ಕ ವಾಚಿಸಿದರು. ನಂತರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆ ನಡೆಯಿತು.

ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ನೂತನ ಅಧ್ಯಕ್ಷರಾಗಿ ಅಬ್ದುಲ್ ಸವಾದ್ ಕಲ್ಲರ್ಪೆ ಮರು ಆಯ್ಕೆಯಾದರು. ಉಪಾಧ್ಯಕ್ಷ ರಾಗಿ ಮುಹಮ್ಮದ್ ಅಫ್ರೀದ್ , ಕಾರ್ಯದರ್ಶಿಯಾಗಿ ಮುಹಮ್ಮದ್ ರಿಯಾಝ್ ಮರು ಆಯ್ಕೆಯಾದರು. ಜೊತೆ ಕಾರ್ಯದರ್ಶಿಯಾಗಿ ಮಿಸ್ರಿಯಾ ಹಾಗೂ ಖಜಾಂಜಿಯಾಗಿ ಉಮರ್ ಫಾರೂಕ್ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಮುಹಮ್ಮದ್ ನಿಝಾಮುದ್ದೀನ್ , ಶಮ್ಮಾಸ್ , ಅಹಮ್ಮದ್ ಪವಾಝ್ , ಇರ್ಷಾನ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯನ್ನು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಶ್ವನ್ ಸ್ವಾದಿಕ್ ಹಾಗೂ ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾ ಉಪಾಧ್ಯಕ್ಷರಾದ ಫಹದ್ ಅನ್ವರ್ ನೆರವೇರಿಸಿದರು.


