Uncategorized

ನಿರ್ಜೀವಗೊಂಡಿರುವ ಶಿಕ್ಷಣ ಇಲಾಖೆಯನ್ನು ಮರುಜೀವಗೊಳಿಸಿ : ಕ್ಯಾಂಪಸ್ ಫ್ರಂಟ್ ಪ್ರತಿಭಟನೆಯಲ್ಲಿ ಮುಹಮ್ಮದ್ ರಿಯಾಝ್

“ಶಿಕ್ಷಣ ಸಚಿವರನ್ನು ನೇಮಿಸಿ” ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ತಾಲೂಕು ಪ್ರತಿಭಟನೆ

ಪುತ್ತೂರು : ರಾಜ್ಯದ ಸಚಿವಾಲಯದಲ್ಲಿ ಪ್ರಮುಖ ಇಲಾಖೆಯಾದ ಶಿಕ್ಷಣ ಇಲಾಖೆಯಲ್ಲಿ ಸಚಿವರಿಲ್ಲದೆ ,ಇಲಾಖೆಯೇ ನಿರ್ಜೀವವಾಗಿದೆ. ಇದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಲಿದ್ದು ಶಿಕ್ಷಣ ಸಚಿವರನ್ನು ಇನ್ನೂ ನೇಮಿಸದೇ ಇರುವ ರಾಜ್ಯ ಸರ್ಕಾರದ ಧೋರಣೆ ಖಂಡನೀಯವೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಮುಹಮ್ಮದ್ ರಿಯಾಝ್ ಕಡಂಬು ಹೇಳಿದರು. ಅವರು ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿಯು ಆಯೋಜಿಸಿದ ಶಿಕ್ಷಣ ಸಚಿವರ ಶೀಘ್ರ ನೇಮಕ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರಿನ ಗಾಂಧಿಕಟ್ಟೆ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಇದೀಗ ಶಿಕ್ಷಣ ಸಚಿವರಿಲ್ಲದೆ ಇಲಾಖೆಯೇ ನಿರ್ಜೀವವಾಗಿದೆ, ಅದೇ ರೀತಿ ಸುಮಾರು 3 ವರ್ಷದಿಂದ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ಮತ್ತು ಪಿಯು.ಸಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿದ್ದು ಶಿಕ್ಷಣ ಇಲಾಖೆಯನ್ನು ಹದ್ದುಬಸ್ತಿನಲ್ಲಿಟ್ಟು ವ್ಯವಸ್ಥೆಯನ್ನು ಅವಲೋಕನ ನಡೆಸಿ ಪಾರದರ್ಶಕವಾಗಿ ಕಾರ್ಯಾಚರಿಸಲು ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ , ಈಗಾಗಲೇ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಕಾರಿಯಾಗುವ ಉದ್ದೇಶದಿಂದ ಉಚಿತ ಸೈಕಲ್ ಯೋಜನೆಯು ಜಾರಿಯಲ್ಲಿದ್ದು ಶಾಲೆ ಆರಂಭವಾಗಿ ತಿಂಗಳುಗಳೇ ಕಳೆದರೂ ಇನ್ನೂ ಕೂಡಾ ರಾಜ್ಯದ ಹಲವಾರು ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸದೆ ಶಾಲೆಗಳಲ್ಲಿ ತುಕ್ಕು ಹಿಡಿಯುತ್ತಿದೆ.

ಇನ್ನೋಂದೆಡೆ ಪದವಿ ಪೂರ್ವ ಶಿಕ್ಷಣ ಇಲಾಖೆಗಳಲ್ಲಿ 3 ತಿಂಗಳಿನಿಂದ ಪೂರ್ಣಾವಧಿ ನಿರ್ದೇಶಕರಿಲ್ಲದೆ ಹಾಗೂ ಪ್ರಮುಖ ಹುದ್ದೆಗಳಾದ ಜಂಟಿ ನಿರ್ದೇಶಕರು ಮತ್ತು ಉಪನಿರ್ದೇಶಕರಿಲ್ಲದೆ ವ್ಯವಸ್ಥೆಯೇ ಸ್ಥಗಿತಗೊಂಡಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಶಾಲಾ ಮತ್ತು ಕಾಲೇಜುಗಳಲ್ಲಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿದ್ದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈ ಕುರಿತು ಗೊಂದಲಕ್ಕೀಡಾಗಿದ್ದಾರೆ. ರಾಜ್ಯ ಸರ್ಕಾರ ಹಾಗೂ ಸಂಬಂದಪಟ್ಟ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ನಂತರ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಅಧ್ಯಕ್ಷರಾದ ಸವಾದ್ ಕಲ್ಲರ್ಪೆ ಮಾತನಾಡಿ ರಾಜ್ಯದ ಶಿಕ್ಷಣ ಸಚಿವರಾಗಿದ್ದ ಎನ್ ಮಹೇಶ್ ರಾಜಿನಾಮೆ ಬಳಿಕ ಸಚಿವ ಸಂಪುಟ ವಿಸ್ತರಣೆಗೊಂಡರೂ ಇಂದು ರಾಜಕೀಯ ಕಚ್ಚಾಟದಿಂದ ಸಮರ್ಥ ಸಚಿವರನ್ನು ಇಲಾಖೆಗೆ ನೇಮಿಸದಿರುವುದು ಖಂಡನಾರ್ಹವಾಗಿದೆ ಎಂದರು. ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮುಹಮ್ಮದ್ ಹಫೀಝ್ ಮಾತನಾಡಿ ಒಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವು ಉತ್ತಮವಾಗಿ ರೂಪುಗೊಳ್ಳಲು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಅವಿಭಾಜ್ಯ ಘಟ್ಟವಾಗಿದೆ ಆದರೆ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿರುವ ಶಿಕ್ಷಣ ಇಲಾಖೆ ಹೇಗೆ ಸರಿಯಾದ ಶಿಕ್ಷಣ ವ್ಯವಸ್ಥೆ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಉಪಾಧ್ಯಕ್ಷ ಅಫ್ರೀದ್ ,ತಾಲೂಕು ಸಮಿತಿ ಸದಸ್ಯರಾದ ನಿಝಾಮು, ಶಮ್ಮಾಸ್ , ಪವಾಝ್ ಹಾಗೂ ನಗರ ಸಮಿತಿ ಕಾರ್ಯದರ್ಶಿ ಸಫ್ವಾನ್ ಉಪಸ್ಥಿತರಿದ್ದರು. ತಾಲೂಕು ಕಾರ್ಯದರ್ಶಿ ರಿಯಾಝ್ ಅಂಕತ್ತಡ್ಕ ಸ್ವಾಗತಿಸಿ ಫಾರೂಕ್ ವಂದಿಸಿದರು. ಹಾಶಿರ್ ನಿರೂಪಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group