ರಾಷ್ಟ್ರೀಯ ಸುದ್ದಿ

‘ಲವ್ ಜಿಹಾದ್’ ಆರೋಪ: ಭೋಪಾಲ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ದಾಳಿ, ಮುಖಕ್ಕೆ ಮಸಿ, ಸೆಗಣಿ ಬಳಿದು ಅವಮಾನ

Reading…
Follow Us

ಸಾರಾಂಶ

ಭೋಪಾಲ್‌ನಲ್ಲಿ ‘ಲವ್ ಜಿಹಾದ್’ ಆರೋಪದ ಹೆಸರಿನಲ್ಲಿ ಮುಸ್ಲಿಂ ಯುವಕ ಆರಿಫ್ ಖಾನ್ ಮೇಲೆ ಗುಂಪು ದಾಳಿ ನಡೆಸಿ, ಅರ್ಧನಗ್ನಗೊಳಿಸಿ ಮುಖಕ್ಕೆ ಮಸಿ, ಸೆಗಣಿ ಹಚ್ಚಿ ಅವಮಾನಿಸಿದೆ. ಯುವತಿ ಪರಸ್ಪರ ಸಮ್ಮತಿಯ ಲಿವ್-ಇನ್ ಸಂಬಂಧ ಎಂದು ಹೇಳಿದರೂ ದೌರ್ಜನ್ಯ ನಡೆದಿದೆ. ದೂರು ಇಲ್ಲದ ಕಾರಣ ಪ್ರಕರಣ ದಾಖಲಾಗಿಲ್ಲ.

ವರದಿಗಾರ; ಭೋಪಾಲ್-ಮೇ.11: ಹಿಂದೂ ಸಂಘಟನೆಯ ಕೆಲ ಕಾರ್ಯಕರ್ತರು ‘ಲವ್ ಜಿಹಾದ್’ ಆರೋಪದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಭೋಪಾಲ್‌ನ ಹೋಟೆಲೊಂದರಲ್ಲಿ ಮುಸ್ಲಿಂ ಯುವಕನ ಮೇಲೆ ದಾಳಿ ನಡೆಸಿ, ಸಾರ್ವಜನಿಕವಾಗಿ ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ.

ಮಾಹಿತಿಯ ಪ್ರಕಾರ, ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಒಟ್ಟಿಗೆ ವಾಸ್ತವ್ಯ ಮಾಡುತ್ತಿದ್ದಾರೆ ಎಂಬ ಅನುಮಾನದಿಂದ ಕೆಲವರು ಹೋಟೆಲ್‌ಗೆ ನುಗ್ಗಿದ್ದಾರೆ. ನಂತರ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿ ಇಬ್ಬರನ್ನೂ ಹೊರತೆಗೆದು, ಯುವಕನನ್ನು ‘ಲವ್ ಜಿಹಾದ್’ ಆರೋಪದಲ್ಲಿ ಗುರಿಯಾಗಿಸಿ, ತೀವ್ರ ಹಲ್ಲೆ ನಡೆಸಿದ್ದಾರೆ.

ಯುವತಿ ಕಳೆದ ಐದು ವರ್ಷಗಳಿಂದ ಪರಸ್ಪರ ಸಮ್ಮತಿಯ ಆಧಾರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೇವೆ ಎಂದು ಹೇಳಿದರೂ, ಗುಂಪು ಆ ಮಾತನ್ನು ಲೆಕ್ಕಿಸದೆ ದೌರ್ಜನ್ಯ ನಡೆಸಿದೆ ಎಂದು ವರದಿಯಾಗಿದೆ.

ಯುವಕನನ್ನು 27 ವರ್ಷದ ಆರಿಫ್ ಖಾನ್ (ಜಹಾಂಗೀರಾಬಾದ್) ಎಂದು ಗುರುತಿಸಲಾಗಿದ್ದು, ಯುವಕನಿಗೆ ತೀವ್ರ ಹಲ್ಲೆ ನಡೆಸಿ, ಅರ್ಧನಗ್ನ ಸ್ಥಿತಿಗೆ ತಂದು, ಮುಖಕ್ಕೆ ಮಸಿ ಮತ್ತು ಸೆಗಣಿ ಹಚ್ಚಿ ಸಾರ್ವಜನಿಕವಾಗಿ ಅವಮಾನಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಯುವತಿ ತನ್ನ ಇಚ್ಛೆಯಿಂದ ಆರಿಫ್‌ರನ್ನು ಭೇಟಿಯಾಗಿದ್ದಾಗಿ, ಯಾವುದೇ ಬಲವಂತ, ಲೈಂಗಿಕ ದೌರ್ಜನ್ಯ ಅಥವಾ ಧರ್ಮಾಂತರ ಒತ್ತಡ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತನ್ನ ನಿವಾಸದಲ್ಲಿ ನಿರ್ಬಂಧಗಳಿದ್ದ ಕಾರಣ ಹೋಟೆಲ್‌ನಲ್ಲಿ ಭೇಟಿಯಾದೆ ಎಂದು ಹೇಳಿದ್ದಾರೆ. ಅವರು ಆರಿಫ್ ವಿರುದ್ಧ ಯಾವುದೇ ದೂರು ನೀಡಲು ನಿರಾಕರಿಸಿದ್ದಾರೆ.

ಈ ಪ್ರಕರಣದಲ್ಲಿ ಅಧಿಕೃತ ದೂರು ಸಲ್ಲಿಸದ ಕಾರಣ ದಾಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲೆಯಾಗಿಲ್ಲ. ಆದರೆ ಪೊಲೀಸ್ ತನಿಖೆಯಲ್ಲಿ ಆರಿಫ್ ಖಾನ್ ವಿರುದ್ಧ ವಂಚನೆ, ಕಳವು ಮತ್ತು ನಂಬಿಕೆ ದ್ರೋಹ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗೋವಿಂದಪುರ ಠಾಣಾ ಅಧಿಕಾರಿಗಳು ಎಲ್ಲಾ ಪಕ್ಷಗಳನ್ನು ಕರೆದು ಸಮಾಲೋಚನೆ ನಡೆಸಿ, ಸಾಮಾಜಿಕ ಸೌಹಾರ್ದ ಕಾಪಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿ ಮಾಡಿವೆ.

Join our WhatsApp Channel Get every Varadigara story instantly
How does this story make you feel?
Share:
POLL

ಭೋಪಾಲ್ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

From Across Varadigara

ರಾಷ್ಟ್ರೀಯ ಸುದ್ದಿ

“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ಅಂತಾರಾಷ್ಟ್ರೀಯ

“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

ಅಂತಾರಾಷ್ಟ್ರೀಯ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626ಕ್ಕೆ ಏರಿಕೆ; 2,478 ಮಂದಿ ನಾಪತ್ತೆ

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?