ನವದೆಹಲಿ, ಜೂ. 30: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ಆರೋಪದ ಕುರಿತು ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ರಾಮ ಮಂದಿರದಲ್ಲಿ ನಡೆದಿರುವ ಆರೋಪಿತ ಲೂಟಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನವು ದೇಶದ ಕೋಟ್ಯಂತರ ಭಕ್ತರ ಧಾರ್ಮಿಕ ನಂಬಿಕೆಯ ಮೇಲಿನ ನೇರ ದಾಳಿಯಾಗಿದೆ ಎಂದು ಆರೋಪಿಸಿದರು.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆ ಪಾರದರ್ಶಕವಾಗಿರಲಿಲ್ಲ ಹಾಗೂ ಅದನ್ನು ಮಾಹಿತಿ ಹಕ್ಕು ಕಾಯ್ದೆಯ (RTI) ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಅವರು ಟೀಕಿಸಿದರು. ಪ್ರಧಾನಿ ಮೋದಿ ಅವರು ಈ ಕುರಿತು ತಮ್ಮ ಮೌನ ಮುರಿದು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಇದರ ಮಧ್ಯೆ, ರಾಮ ಮಂದಿರಕ್ಕೆ ಕಾಂಗ್ರೆಸ್ ನಿಯೋಗ ಭೇಟಿ ನೀಡುವ ಮುನ್ನವೇ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

