ಬೆಂಗಳೂರು: ರಾಜ್ಯದ ನೂತನ ಸರ್ಕಾರದ ರಚನೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸದಸ್ಯರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಇವರೊಂದಿಗೆ ಸಚಿವರಾಗಿ ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣ ಪ್ರಕಾಶ್ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ರಾಜ್ಯಪಾಲರಿಗೆ ಸಲ್ಲಿಸಲಾದ ಪಟ್ಟಿಯಂತೆ ಮೊದಲ ಹಂತದಲ್ಲಿ ಒಟ್ಟು 14 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ನಂತರದ ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪ್ರಮಾಣ ವಚನ ಸ್ವೀಕರಿಸಲಿರುವವರ ಪಟ್ಟಿ:
- ಡಿ.ಕೆ. ಶಿವಕುಮಾರ್ – ಮುಖ್ಯಮಂತ್ರಿ
- ಡಾ. ಜಿ. ಪರಮೇಶ್ವರ್ – ಉಪಮುಖ್ಯಮಂತ್ರಿ
- ಕೆ.ಹೆಚ್. ಮುನಿಯಪ್ಪ – ಸಚಿವರು
- ಕೆ.ಜೆ. ಜಾರ್ಜ್ – ಸಚಿವರು
- ಎಂ.ಬಿ. ಪಾಟೀಲ್ – ಸಚಿವರು
- ರಾಮಲಿಂಗಾ ರೆಡ್ಡಿ – ಸಚಿವರು
- ಸತೀಶ್ ಜಾರಕಿಹೊಳಿ – ಸಚಿವರು
- ಕೃಷ್ಣ ಬೈರೇಗೌಡ – ಸಚಿವರು
- ಪ್ರಿಯಾಂಕ್ ಖರ್ಗೆ – ಸಚಿವರು
- ಯು.ಟಿ. ಖಾದರ್ – ಸಚಿವರು
- ಈಶ್ವರ್ ಖಂಡ್ರೆ – ಸಚಿವರು
- ಯತೀಂದ್ರ ಸಿದ್ದರಾಮಯ್ಯ – ಸಚಿವರು
- ಬೈರತಿ ಸುರೇಶ್ – ಸಚಿವರು
- ಶರಣ ಪ್ರಕಾಶ್ ಪಾಟೀಲ್ – ಸಚಿವರು

