ಸಾಮಾಜಿಕ ತಾಣ

ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಗಳ ಜಾಹೀರಾತು; ಮೆಟಾ ಬೇಜವಾಬ್ದಾರಿತನ ಬಯಲಿಗೆಳೆದ ಬಿಬಿಸಿ ತನಿಖಾ ವರದಿ

Reading…
ಹನಿ ಸುದ್ದಿ ⚡ NEW
Quick reads · Scroll through cards
Open feed →
SIR ವಿರುದ್ಧ ‘ಠಾಕ್ರೆ ಸಹೋದರರ’ ಹೋರಾಟ: ಅಕ್ಟೋಬರ್ 4ರಂದು ಮುಂಬೈಯಲ್ಲಿ ಜಂಟಿ ಪ್ರತಿಭಟನೆ
ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ
ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು
ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!
ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!
ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ಸಾರಾಂಶ

ಭಾರತದಲ್ಲಿ ಇನ್‌ಸ್ಟಾಗ್ರಾಮ್ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಉತ್ತೇಜಿಸುವ ಜಾಹೀರಾತುಗಳನ್ನು (Paid Ads) ಪ್ರದರ್ಶಿಸುತ್ತಿರುವುದನ್ನು ಬಿಬಿಸಿ ವರದಿಗಾರ್ತಿ ದಿವ್ಯಾ ಆರ್ಯ ಅವರ ತನಿಖಾ ವರದಿ ಬಯಲಿಗೆಳೆದಿದೆ. ಕೇವಲ 99 ರೂ.ಗೆ ಇಂತಹ ಆಕ್ಷೇಪಾರ್ಹ ವಿಡಿಯೋಗಳನ್ನು ಮಾರಾಟ ಮಾಡುವ ಟೆಲಿಗ್ರಾಂ ಚಾನಲ್‌ಗಳ ಲಿಂಕ್‌ಗಳು ಇನ್‌ಸ್ಟಾಗ್ರಾಮ್‌ನ ಜಾಹೀರಾತು ಪರಿಶೀಲನಾ ವ್ಯವಸ್ಥೆಯಲ್ಲೇ ಅನುಮೋದನೆ ಪಡೆದುಕೊಂಡಿರುವುದು ಮತ್ತು ಈ ಜಾಹೀರಾತುಗಳಿಂದ ಮೆಟಾಗೆ ಆದಾಯ ಹರಿದುಬಂದಿರುವುದನ್ನು ಈ ವರದಿ ಸಾಕ್ಷ್ಯಸಮೇತ ಅನಾವರಣಗೊಳಿಸಿದೆ.

ಭಾರತದಲ್ಲಿ ಇನ್‌ಸ್ಟಾಗ್ರಾಮ್ ಮಕ್ಕಳ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ದೃಶ್ಯಗಳನ್ನು ಉತ್ತೇಜಿಸುವ ಜಾಹೀರಾತುಗಳನ್ನು (ಪೇಡ್ ಆಡ್ಸ್) ಪ್ರದರ್ಶಿಸುತ್ತಿದೆ ಎಂದು ಬಿಬಿಸಿ ಐ (BBC Eye) ತನಿಖಾ ವರದಿ ಬಯಲಿಗೆಳೆದಿದೆ. ಇನ್‌ಸ್ಟಾಗ್ರಾಮ್‌ನ ಜಾಹೀರಾತು ಪರಿಶೀಲನಾ ವ್ಯವಸ್ಥೆಯೇ ಇಂತಹ ಕಾನೂನುಬಾಹಿರ ಜಾಹೀರಾತುಗಳಿಗೆ ಅನುಮೋದನೆ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಬಿಬಿಸಿ ಹಿರಿಯ ವರದಿಗಾರ್ತಿ ದಿವ್ಯಾ ಆರ್ಯ ನೇತೃತ್ವದಲ್ಲಿ ಈ ತನಿಖೆ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ತಮಗೆ ಎದುರಾದ ಕೆಲವು ಅನುಮಾನಾಸ್ಪದ ಜಾಹೀರಾತು ಬೆನ್ನತ್ತಿದ ದಿವ್ಯಾ, ಭಾರತದ ವಿಳಾಸ ಬಳಸಿ ನಕಲಿ ಖಾತೆ ತೆರೆದಿದ್ದರು. ಕೆಲವೇ ದಿನಗಳಲ್ಲಿ ಅವರ ಇನ್‌ಸ್ಟಾಗ್ರಾಮ್ ಫೀಡ್‌ನಲ್ಲಿ ಅಡಲ್ಟ್ ಕಟೆಂಟ್‌ಗಳ (Adult Content) ಜಾಹೀರಾತುಗಳು ಬರಲಾರಂಭಿಸಿದವು. ಬೆನ್ನಲ್ಲೇ, ಸಣ್ಣ ವಯಸ್ಸಿನ ಮಕ್ಕಳು ವಯಸ್ಕರೊಂದಿಗೆ ಲೈಂಗಿಕ ಪ್ರಕೃತಿಗಳಲ್ಲಿರುವಂತೆ ಬಿಂಬಿಸುವ ಆಕ್ಷೇಪಾರ್ಹ ಜಾಹೀರಾತುಗಳು ಪ್ರತ್ಯಕ್ಷವಾದವು. ಈ ಜಾಹೀರಾತುಗಳಲ್ಲಿ ‘ರೇಪ್ ವಿಡಿಯೋ’ ಮತ್ತು ‘ಚೈಲ್ಡ್ ವಿಡಿಯೋ’ ಎಂಬ ಪದಗಳನ್ನು ಮುಕ್ತವಾಗಿ ಬಳಸಲಾಗಿತ್ತು. ಕೇವಲ 99 ರೂಪಾಯಿಗಳಿಗೆ ಇಂತಹ ವಿಡಿಯೋ ಮಾರಾಟ ಮಾಡುವ ಟೆಲಿಗ್ರಾಂ ಚಾನಲ್‌ಗಳ ಲಿಂಕ್‌ಗಳನ್ನು ನೀಡಲಾಗಿತ್ತು. ತನಿಖೆಯಲ್ಲಿ ಇಂತಹ 30 ಕ್ಕೂ ಹೆಚ್ಚು ಜಾಹೀರಾತುಗಳು ಪತ್ತೆಯಾಗಿವೆ.

ಕಾನೂನು ಉಲ್ಲಂಘನೆ ಮತ್ತು ಮೆಟಾ ಲಾಭ ಗಳಿಕೆ

ಭಾರತೀಯ ಕಾನೂನಿನ ಪ್ರಕಾರ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಗಳ (CSAM) ಪ್ರಸಾರ ಮತ್ತು ಹಂಚಿಕೆ ಗಂಭೀರ ಆಪರಾಧ. ಇನ್‌ಸ್ಟಾಗ್ರಾಮ್‌ನ ಸ್ವಂತ ನೀತಿಗಳು ಕೂಡ ಇಂತಹ ಕಟೆಂಟ್‌ಗಳನ್ನು ನಿಷೇಧಿಸುತ್ತವೆ. ಆದರೆ, ಮೆಟಾ ಇಂತಹ ಅಪರಾಧ ಕೃತ್ಯಗಳ ಜಾಹೀರಾತುಗಳಿಂದ ಹಣ ಗಳಿಸುತ್ತಿದೆ ಎಂಬುದು ತನಿಖೆಯಿಂದ ಸಾಬೀತಾಗಿದೆ. ಮೆಟಾ ಒಟ್ಟು ಆದಾಯದ ಶೇಕಡಾ 98 ಭಾಗ ಜಾಹೀರಾತುಗಳಿಂದಲೇ ಬರುತ್ತದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರದರ್ಶನಗೊಳ್ಳುವ ಪ್ರತಿಯೊಂದು ಜಾಹೀರಾತಿಗೂ ಸಂಸ್ಥೆ ಹಣ ಪಡೆಯುತ್ತದೆ. ಹೀಗಾಗಿ, ಮಕ್ಕಳ ಮೇಲಿನ ದೌರ್ಜನ್ಯವನ್ನು ವ್ಯವಹಾರವಾಗಿಸಿಕೊಂಡಿರುವ ಮಾಫಿಯಾ ಇನ್‌ಸ್ಟಾಗ್ರಾಮ್‌ಗೆ ಹಣ ಪಾವತಿಸಿ ತನ್ನ ಜಾಲ ವಿಸ್ತರಿಸಿಕೊಳ್ಳುತ್ತಿದೆ.

ಫೇಸ್‌ಬುಕ್‌ನ ಮಾಜಿ ಉಪಾಧ್ಯಕ್ಷ ಬ್ರಿಯಾನ್ ಬೋಲ್ಯಾಂಡ್ ಪ್ರತಿಕ್ರಿಯಿಸಿ, “ಇನ್‌ಸ್ಟಾಗ್ರಾಮ್ ಅಲ್ಗಾರಿದಮ್‌ಗಳು (Algorithms) ಬಳಕೆದಾರರನ್ನು ಹಿಡಿದಿಟ್ಟುಕೊಳ್ಳಲು ಮತ್ತು ಹೆಚ್ಚು ಆದಾಯ ಗಳಿಸಲು ಹೆಚ್ಚು ತೀವ್ರ ಹಾಗೂ ಪ್ರಚೋದನಾತ್ಮಕ ವಿಷಯಗಳ ಕಡೆಗೆ ತಳ್ಳುತ್ತವೆ. ಬಳಕೆದಾರರ ಸುರಕ್ಷತೆಯ ಬಗ್ಗೆ ಮೆಟಾಗೆ ಕಾಳಜಿಯಿಲ್ಲ,” ಎಂದು ಆರೋಪಿಸಿದ್ದಾರೆ.

ವಿಡಿಯೋ ವೀಕ್ಷಿಸಿ

ಸುಪ್ರೀಂ ಕೋರ್ಟ್ ಹಸ್ತಕ್ಷೇಪಕ್ಕೆ ತಜ್ಞರ ಆಗ್ರಹ

ವರದಿಯ ಬೆನ್ನಲ್ಲೇ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಲೋಕೂರ್, “ಇದು ಅತ್ಯಂತ ಗಂಭೀರ ವಿಷಯ. ಇನ್‌ಸ್ಟಾಗ್ರಾಮ್ ಕ್ರಿಮಿನಲ್ ಚಟಯುವಟಿಕೆಯಲ್ಲಿ ಭಾಗಿಯಾಗಿ ಹಣ ಗಳಿಸುತ್ತಿದೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಸ್ವಯಂಪ್ರೇರಿತವಾಗಿ (ಸುಮೋಟೋ) ಕೈಗೆತ್ತಿಕೊಂಡು, ಇಂತಹ ಸಾಮಾಜಿಕ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ತಮಗೆ ಜವಾಬ್ದಾರಿಯಿಲ್ಲ ಎಂದು ಹೇಳಿ ಸಾಮಾಜಿಕ ಮಾಧ್ಯಮಗಳು ನುಣುಚಿಕೊಳ್ಳಲು ಸಾಧ್ಯವಿಲ್ಲ,” ಎಂದಿದ್ದಾರೆ.

ತೆಲಂಗಾಣದ ಸೈಬರ್ ಸೆಕ್ಯೂರಿಟಿ ಬ್ಯೂರೋ ನಿರ್ದೇಶಕಿ ಶಿಖಾ ಗೋಯೆಲ್ ಅವರ ಪ್ರಕಾರ, 2025 ರಲ್ಲೇ ಭಾರತದಲ್ಲಿ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 1.9 ಮಿಲಿಯನ್ ದೂರುಗಳು ದಾಖಲಾಗಿವೆ. ಅಪರಾಧಿಗಳು ಇನ್‌ಸ್ಟಾಗ್ರಾಮ್ ಅನ್ನು ಜಾಹೀರಾತು ವೇದಿಕೆಯನ್ನಾಗಿ ಬಳಸಿ ಗ್ರಾಹಕರನ್ನು ಪತ್ತೆಹಚ್ಚಿ, ನಂತರ ನಿಯಂತ್ರಣ ಕಷ್ಟವಿರುವ ಟೆಲಿಗ್ರಾಂ ಆ್ಯಪ್‌ಗೆ ಕರೆದೊಯ್ಯುತ್ತಿದ್ದಾರೆ ಎಂದು ರತಿ ಫೌಂಡೇಶನ್‌ನ ಸಿದ್ಧಾರ್ಥ್ ಪಿಳ್ಳೈ ಮತ್ತು ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್‌ನ ಭುವನ್ ರಿಭು ಕಳವಳ ವ್ಯಕ್ತಪಡಿಸಿದ್ದಾರೆ.

ಮೆಟಾ ಸಮರ್ಥನೆ

ಬಿಬಿಸಿ ತಂಡ ಇಂತಹ ಜಾಹೀರಾತಿನ ವಿರುದ್ಧ ಇನ್‌ಸ್ಟಾಗ್ರಾಮ್‌ಗೆ ದೂರು ನೀಡಿದಾಗ, ಆರಂಭದಲ್ಲಿ “ಇದು ನಮ್ಮ ನಿಯಮಗಳನ್ನು (community guidelines) ಉಲ್ಲಂಘಿಸಿಲ್ಲ” ಎಂಬ ಬೇಜವಾಬ್ದಾರಿಯ ಉತ್ತರ ಬಂದಿತ್ತು. ಆದರೆ ಬಿಬಿಸಿ ಅಧಿಕೃತವಾಗಿ ಪ್ರಶ್ನೆಗಳನ್ನು ಕಳುಹಿಸಿದ ನಂತರ ಎಚ್ಚೆತ್ತ ಮೆಟಾ, ಹಲವು ಜಾಹೀರಾತುಗಳನ್ನು ಮತ್ತು ಆ ಖಾತೆಗಳನ್ನು ಅಮಾನತುಗೊಳಿಸಿದೆ. ಮುಂಬೈ ಟೆಕ್ ವೀಕ್ ಕಾರ್ಯಕ್ರಮದಲ್ಲಿ ಮೆಟಾ ಇಂಡಿಯಾ ಮುಖ್ಯಸ್ಥ ಅರುಣ್ ಶ್ರೀನಿವಾಸ್ ಅವರನ್ನು ಈ ಬಗ್ಗೆ ನೇರವಾಗಿ ಪ್ರಶ್ನಿಸಿದಾಗ ಅವರು ಉತ್ತರಿಸದೆ ನುಣುಚಿಕೊಂಡಿದ್ದಾರೆ.

ನಂತರ ಲಿಖಿತ ಹೇಳಿಕೆ ನೀಡಿರುವ ಮೆಟಾ ಸಂಸ್ಥೆ, “ಮಕ್ಕಳ ಮೇಲಿನ ದೌರ್ಜನ್ಯ ಭೀಕರ ಅಪರಾಧವಾಗಿದ್ದು, ಇದನ್ನು ತಡೆಯಲು ನಾವು ತಂತ್ರಜ್ಞಾನ ಮತ್ತು ಮಾನವ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. ನಾವು ಉದ್ದೇಶಪೂರ್ವಕವಾಗಿ ಇಂತಹ ಜಾಹೀರಾತುಗಳನ್ನು ಪ್ರದರ್ಶಿಸುತ್ತಿದ್ದೇವೆ ಎಂಬ ಆರೋಪ ಸುಳ್ಳು. ಯಾವುದೇ ವ್ಯವಸ್ಥೆ ಪರಿಪೂರ್ಣವಾಗಿರುವುದಿಲ್ಲ,” ಎಂದು ಸಮರ್ಥಿಸಿಕೊಂಡಿದೆ.

ಪ್ರಸ್ತುತ ಜುಲೈ 3, 2026 ರಂದು ಈ ತನಿಖಾ ಸಾಕ್ಷ್ಯಚಿತ್ರ ಬಿಡುಗಡೆಯಾಗಿದ್ದು ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತ ಸರ್ಕಾರ ಅಥವಾ ನ್ಯಾಯಾಲಯಗಳು ಇನ್‌ಸ್ಟಾಗ್ರಾಮ್ ವಿರುದ್ಧ ಯಾವ ರೀತಿಯ ಕಾನೂನು ಕ್ರಮ ಜರುಗಿಸಲಿವೆ ಎಂಬುದನ್ನು ಕಾದು ನೋಡಬೇಕಿದೆ.

Share:
How does this story make you feel?
Join our WhatsApp Channel Get every Varadigara story instantly →

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Follow Us
ಹನಿ ಸುದ್ದಿ ⚡ NEW
News Cards · Swipe to read
See All →

From Across Varadigara

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

SIR ವಿರುದ್ಧ ‘ಠಾಕ್ರೆ ಸಹೋದರರ’ ಹೋರಾಟ: ಅಕ್ಟೋಬರ್ 4ರಂದು ಮುಂಬೈಯಲ್ಲಿ ಜಂಟಿ ಪ್ರತಿಭಟನೆ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಷ್ಟ್ರೀಯ ಸುದ್ದಿ

‘ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ : ಯುವಜನತೆಗೆ ನಿರ್ಮಲಾ ಸೀತಾರಾಮನ್ ಸಲಹೆ