ಮಹಾರಾಷ್ಟ್ರದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿ ಹಾಗೂ ಜನರ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧ ನೀತಿಯೇ ಕಾರಣ ಎಂದು ಮಹಾರಾಷ್ಟ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಂಸದ ಸುಜಯ್ ವಿಖೆ-ಪಾಟೀಲ್ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ವಿಳಂಬವಾಗಿರುವ ಅಹಲ್ಯಾಬಾಯಿ ನಗರ ಮತ್ತು ಮನ್ಮಾಡ್ ನಡುವಿನ ರಸ್ತೆ ಕಾಮಗಾರಿಯ ಕುರಿತು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಧ್ಯಪ್ರಾಚ್ಯದಲ್ಲಿ ಇರಾನ್ ಮೇಲಿನ ದಾಳಿಗಳಿಂದಾಗಿ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ತಿಳಿಸಿದರು. ಕಚ್ಚಾ ತೈಲದ ಪೂರೈಕೆ ಕಡಿಮೆಯಾಗಿದ್ದರಿಂದ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಬಿಟುಮೆನ್ (ಡಾಂಬರು) ಉತ್ಪಾದನೆಯಲ್ಲಿ ಕೊರತೆ ಎದುರಾಗಿದೆ. ಈ ಎಲ್ಲಾ ಜಾಗತಿಕ ಏರಿಳಿತಗಳಿಗೆ ಡೊನಾಲ್ಡ್ ಟ್ರಂಪ್ ಅವರ ರಕ್ಷಣಾ ಮತ್ತು ವಿದೇಶಾಂಗ ನೀತಿಯೇ ನೇರ ಕಾರಣ ಎಂದು ವಿಖೆ-ಪಾಟೀಲ್ ಆರೋಪಿಸಿದರು.
ಮಾತನ್ನು ಮುಂದುವರಿಸಿದ ಅವರು, ಟ್ರಂಪ್ ಅವರ ದಿನಕ್ಕೊಂದು ಹೇಳಿಕೆಗಳು ಜಾಗತಿಕ ಮಟ್ಟದಲ್ಲಿ ಗೊಂದಲ ಸೃಷ್ಟಿಸಿವೆ. ಈ ಗೊಂದಲದ ವಾತಾವರಣದಿಂದಾಗಿ ದೇಶದ ಕೆಲವು ಜನರಲ್ಲಿ ಆತಂಕ ಹೆಚ್ಚಾಗಿ ಮದ್ಯಪಾನ ಮಾಡುವ ಪ್ರಮಾಣವೂ ಏರಿಕೆಯಾಗಿದೆ ಎಂದು ವಾದಿಸಿದರು.
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ಮಹಾರಾಷ್ಟ್ರದ ಪ್ರಭಾವಿ ಸಚಿವ ರಾಧಾಕೃಷ್ಣ ವಿಖೆ-ಪಾಟೀಲ್ ಅವರ ಪುತ್ರನಾಗಿರುವ ಸುಜಯ್ ಅವರ ಈ ವಿಲಕ್ಷಣ ಪ್ರಕಟಣೆ ಈಗ ಜಾಲತಾಣಗಳಲ್ಲಿ ಹಾಗೂ ರಾಜಕೀಯ ವಲಯದಲ್ಲಿ ವ್ಯಾಪಕ ವ್ಯಂಗ್ಯಕ್ಕೆ ಕಾರಣವಾಗಿದೆ.
ಸ್ಥಳೀಯ ಮೂಲಸೌಕರ್ಯ ಯೋಜನೆಯ ವಿಳಂಬವನ್ನು ಅಮೆರಿಕದ ವಿದೇಶಾಂಗ ನೀತಿಯೊಂದಿಗೆ ಸಂಯೋಜಿಸಿರುವ ಈ ಹೇಳಿಕೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ತಾಂತ್ರಿಕ ಆಧಾರ ಅಥವಾ ಆಡಳಿತಾತ್ಮಕ ಸಾಕ್ಷ್ಯಗಳು ಲಭ್ಯವಾಗಿಲ್ಲ. ಭಾರತ ಸರ್ಕಾರವಾಗಲಿ ಅಥವಾ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ಪ್ರಾಧಿಕಾರವಾಗಲಿ ಡಾಂಬರು ಕೊರತೆಗೆ ಜಾಗತಿಕ ಯುದ್ಧ ಕಾರಣ ಎಂದು ಅಧಿಕೃತವಾಗಿ ಎಲ್ಲೂ ಸ್ಪಷ್ಟನೆ ನೀಡಿಲ್ಲ.
ಪ್ರಸ್ತುತ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯ ಕಾಮಗಾರಿಗಳ ವಿಳಂಬಕ್ಕೆ ಆಡಳಿತಾರೂಢ ನಾಯಕರು ಜಾಗತಿಕ ಕಾರಣಗಳನ್ನು ನೀಡಿ ಜಾರಿಕೊಳ್ಳುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.
