ರಾಷ್ಟ್ರೀಯ ಸುದ್ದಿ

NEET ಹಗರಣ ತನಿಖೆ ತೀವ್ರಗೊಳಿಸಿದ ಸಿಬಿಐ: ನಾಗ್ಪುರ–ಚಂದ್ರಪುರದಲ್ಲಿ ವಿದ್ಯಾರ್ಥಿಗಳ ಮನೆಗಳ ಮೇಲೆ ದಾಳಿ

Reading…
Follow Us

ಸಾರಾಂಶ

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಿಬಿಐ, ನಾಗ್ಪುರ ಮತ್ತು ಚಂದ್ರಪುರದಲ್ಲಿ ಮೂವರು ವಿದ್ಯಾರ್ಥಿಗಳ ಮನೆಗಳ ಮೇಲೆ ದಾಳಿ ನಡೆಸಿದೆ. ಲಾತೂರ್‌ನ ತರಬೇತಿ ಕೇಂದ್ರದ ನಿರ್ದೇಶಕನನ್ನೂ ವಶಕ್ಕೆ ಪಡೆಯಲಾಗಿದೆ. ಸುಮಾರು ಸಾವಿರ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಖರೀದಿಸಿರುವ ಶಂಕೆ ವ್ಯಕ್ತವಾಗಿದೆ.

ವರದಿಗಾರ – ಮೇ 20
ಹೊಸದಿಲ್ಲಿ: NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ Central Bureau of Investigation (ಸಿಬಿಐ), ಮಹಾರಾಷ್ಟ್ರದ ನಾಗ್ಪುರ ಹಾಗೂ ಚಂದ್ರಪುರದಲ್ಲಿ ಮೂವರು ವಿದ್ಯಾರ್ಥಿಗಳ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ತನಿಖೆಯ ಭಾಗವಾಗಿ ಲಾತೂರ್‌ನ ತರಬೇತಿ ಕೇಂದ್ರದ ನಿರ್ದೇಶಕನನ್ನು ವಶಕ್ಕೆ ಪಡೆದಿರುವ ಸಿಬಿಐ, ಸುಮಾರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ಖರೀದಿಸಿರುವ ಶಂಕೆ ವ್ಯಕ್ತಪಡಿಸಿದೆ. ಲಾತೂರ್‌ನ ‘RCC Classes’ ನಿರ್ದೇಶಕ ಪ್ರೊ. ಶಿವರಾಜ್ ಮೋಟೆಗಾಂವ್ಕರ್ ಅವರನ್ನು ಸಿಬಿಐ ವಿಚಾರಣೆಗಾಗಿ ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ.

NEET ಪರೀಕ್ಷೆಯ ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆಗಳ ಸೋರಿಕೆ ಸಂಬಂಧ ಸಿಬಿಐನ ಆರ್ಥಿಕ ಅಪರಾಧ ವಿಭಾಗ ದೆಹಲಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ನಾಗ್ಪುರದಲ್ಲಿನ ಕೆಲವು ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗಳ ಆಧಾರದಲ್ಲಿ ತನಿಖೆ ವಿಸ್ತರಿಸಲಾಗಿದ್ದು, ಎರಡು ತಂಡಗಳು ಸ್ಥಳೀಯವಾಗಿ ಶೋಧ ಕಾರ್ಯಾಚರಣೆ ನಡೆಸಿವೆ.

ನಾಗ್ಪುರದಲ್ಲಿನ ಇಬ್ಬರು ವಿದ್ಯಾರ್ಥಿಗಳು ಹಾಗೂ ಚಂದ್ರಪುರ ಜಿಲ್ಲೆಯ ಬ್ರಹ್ಮಪುರಿಯ ಓರ್ವ ವಿದ್ಯಾರ್ಥಿಯ ಮನೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಮತ್ತು ನೋಟ್ ಬುಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸೋರಿಕೆಯಾಗಿರುವ ಪ್ರಶ್ನೆ ಪತ್ರಿಕೆಗಳೊಂದಿಗೆ ಇವುಗಳಿಗೆ ಯಾವುದೇ ಸಂಬಂಧವಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಈ ವಂಚನೆ ಜಾಲವು ರಾಷ್ಟ್ರ ಮಟ್ಟದಲ್ಲಿ ವ್ಯಾಪಕವಾಗಿರಬಹುದು ಎಂಬ ಶಂಕೆಯ ಹಿನ್ನೆಲೆಯಲ್ಲಿ ಸಿಬಿಐ ದೇಶದ ವಿವಿಧ ಭಾಗಗಳಲ್ಲಿ ಶೋಧ ಮುಂದುವರಿಸಿದೆ. ಆದಾಗ್ಯೂ, ಈ ಹಗರಣದ ಕೇಂದ್ರ ನಾಗ್ಪುರ ಅಲ್ಲ ಎಂದು ಸಿಬಿಐ ಮೂಲಗಳು ಸ್ಪಷ್ಟಪಡಿಸಿವೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

From Across Varadigara

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಷ್ಟ್ರೀಯ ಸುದ್ದಿ

‘ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ : ಯುವಜನತೆಗೆ ನಿರ್ಮಲಾ ಸೀತಾರಾಮನ್ ಸಲಹೆ

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ

ರಾಜ್ಯ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು