ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

Reading…
Follow Us

ಸಾರಾಂಶ

ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೂ ರಾಷ್ಟ್ರೀಯ ಮಟ್ಟದಲ್ಲಿ 'ತೃತೀಯ ಶಕ್ತಿ'ಯಾಗುವುದು ಅನುಮಾನ ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಹೇಳಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಯುವಜನರ ಆಕ್ರೋಶಕ್ಕೆ ಪರೀಕ್ಷಾ ಅಕ್ರಮಗಳಿಗಿಂತ ನಿರುದ್ಯೋಗವೇ ಮುಖ್ಯ ಕಾರಣ ಎಂದ ಅವರು, ಎನ್‌ಟಿಎ ವೈಫಲ್ಯ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತೀವ್ರವಾಗಿ ವಿಮರ್ಶಿಸಿದ್ದಾರೆ. ಜೊತೆಗೆ ತಮಿಳುನಾಡಿನಲ್ಲಿ ಡಿಎಂಕೆ-ಬಿಜೆಪಿ ಮೈತ್ರಿ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅದರಲ್ಲಿ ಅಚ್ಚರಿಯೇನಿಲ್ಲ. ಆದರೆ, ರಾಷ್ಟ್ರೀಯ ಮಟ್ಟದಲ್ಲಿ ಅದು ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ‘ತೃತೀಯ ಶಕ್ತಿ’ಯಾಗಿ ಹೊರಹೊಮ್ಮಲು ಸಾಧ್ಯವೇ ಎನ್ನುವುದು ಸದ್ಯಕ್ಕೆ ಅನುಮಾನ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

‘ದಿ ಹಿಂದೂ 360’ ತಮಿಳು ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದೇಶದ ಸದ್ಯದ ರಾಜಕೀಯ ಸ್ಥಿತ್ಯಂತರ ಹಾಗೂ ಯುವಜನರ ಅಸಮಾಧಾನದ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಿಜೆಪಿ ಕೈಗೆತ್ತಿಕೊಂಡಿರುವ ‘ಸ್ಕೂಲ್ ಠೀಕ್ ಕರೋ’ (ಸರ್ಕಾರಿ ಶಾಲೆಗಳನ್ನು ಸುಧಾರಿಸಿ) ಅಭಿಯಾನವು ದೇಶದ ಆಡಳಿತಾರೂಢರ ಗಮನ ಸೆಳೆದಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಇಂತಹ ಪ್ರಾದೇಶಿಕ ಚಳವಳಿಗಳು ಮತ್ತು ಹೊಸ ಪಕ್ಷಗಳು ಹೊರಹೊಮ್ಮುವುದಕ್ಕೆ ಇತಿಹಾಸದಲ್ಲಿ ಹಲವು ಉದಾಹರಣೆಗಳಿವೆ. 1985ರಲ್ಲಿ ಅಸ್ಸಾಂನಲ್ಲಿ ‘ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್’ (ಎಎಸ್‌ಯು) ಚಳವಳಿಯ ಮೂಲಕ ‘ಅಸ್ಸಾಂ ಗಣ ಪರಿಷತ್’ ಅಧಿಕಾರಕ್ಕೆ ಬಂದಿದ್ದನ್ನು ಹಾಗೂ ಇತ್ತೀಚೆಗೆ ನೇಪಾಳದಲ್ಲಿ ಯುವಜನರ (Gen Z) ಪ್ರತಿಭಟನೆಯ ಫಲವಾಗಿ ಬಲೇಂದ್ರ ಶಾ ಪ್ರಧಾನಿಯಾದ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ.

ದೇಶದಲ್ಲಿ ಸದ್ಯ ಎದ್ದಿರುವ ಯುವಜನರ ಆಕ್ರೋಶಕ್ಕೆ ಕೇವಲ ಪರೀಕ್ಷಾ ಅಕ್ರಮಗಳು ಮಾತ್ರ ಕಾರಣವಲ್ಲ ಎಂದಿರುವ ಚಿದಂಬರಂ, ನಿರುದ್ಯೋಗ ಮತ್ತು ಆದಾಯದ ಕೊರತೆಯೇ ಇದರ ಮೂಲ ಬೇರು ಎಂದು ಪ್ರತಿಪಾದಿಸಿದ್ದಾರೆ. ಹಿಂದೆ ಪದವಿ ಪಡೆದರೆ ಗೌರವಾನ್ವಿತ ಸರ್ಕಾರಿ ಉದ್ಯೋಗ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಇಂದು ಇಂಜಿನಿಯರಿಂಗ್, ವೈದ್ಯಕೀಯ ಮಾತ್ರವಲ್ಲದೆ ಐಐಟಿ ಮತ್ತು ಐಐಎಂಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳಿಂದ ಹೊರಬಂದ ಪದವೀಧರರಿಗೂ ಉದ್ಯೋಗ ಭದ್ರತೆ ಇಲ್ಲದಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್
ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ
ವೀಡಿಯೊ

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ
ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ
ಸಾಮಾಜಿಕ ತಾಣ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ
ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ
ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!
ರಾಷ್ಟ್ರೀಯ ಸುದ್ದಿ

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!
ರಾಜ್ಯ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!

ಇದೇ ವೇಳೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸುವ ನೀಟ್ (NEET-UG) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅತ್ಯಲ್ಪ ಖಾಯಂ ಸಿಬ್ಬಂದಿಯನ್ನು ಹೊಂದಿರುವ ಸಂಸ್ಥೆಯೊಂದು ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವಾಗ ಇಂತಹ ಅಕ್ರಮಗಳು ನಡೆಯುವುದು ನಿರೀಕ್ಷಿತವೇ ಆಗಿತ್ತು ಎಂದು ಟೀಕಿಸಿದ್ದಾರೆ.

ತಮಿಳುನಾಡಿನ ರಾಜಕೀಯ ಸನ್ನಿವೇಶದ ಕುರಿತು ಮಾತನಾಡಿದ ಚಿದಂಬರಂ, ವಿಧಾನಸಭೆ ಚುನಾವಣೆಯ ಬಳಿಕ ಆಡಳಿತಾರೂಢ ಡಿಎಂಕೆ ಪಕ್ಷವು ಬಿಜೆಪಿಯತ್ತ ವಾಲುವ ಯಾವುದೇ ಸಾಧ್ಯತೆಗಳಿಲ್ಲ. ಒಂದು ವೇಳೆ ಡಿಎಂಕೆ ಅಂತಹ ನಿರ್ಧಾರ ತಳೆದರೆ ಅದು ತನಗೆ ತಾನೇ ಮಾಡಿಕೊಳ್ಳುವ ದೊಡ್ಡ ಆಘಾತವಾಗಲಿದೆ ಎಂದಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ವಿಷಯದಲ್ಲೂ ಡಿಎಂಕೆ ರಾಜ್ಯದ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಳೆದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಘೋಷಿಸಿದ ಸಿಜೆಪಿ

ರಾಷ್ಟ್ರೀಯ ಸುದ್ದಿ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಷ್ಟ್ರೀಯ ಸುದ್ದಿ

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

From Across Varadigara

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌

ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ಸಾಮಾಜಿಕ ತಾಣ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ

ರಾಷ್ಟ್ರೀಯ ಸುದ್ದಿ

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!

ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ರಾಷ್ಟ್ರೀಯ ಸುದ್ದಿ

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?

ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

ರಾಜ್ಯ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!

ರಾಷ್ಟ್ರೀಯ ಸುದ್ದಿ

ಜಾಗತಿಕ ಹೂಡಿಕೆದಾರರಿಗೆ ಏಷ್ಯಾದಲ್ಲೇ ಅತ್ಯಂತ ಕನಿಷ್ಠ ಆದ್ಯತೆಯಾಗಿ ಭಾರತೀಯ ಷೇರು ಮಾರುಕಟ್ಟೆ: ಬ್ಯಾಂಕ್ ಆಫ್ ಅಮೆರಿಕ ಸಮೀಕ್ಷೆಯಲ್ಲಿ ಕಳವಳಕಾರಿ ಮಾಹಿತಿ ಬಹಿರಂಗ

ರಾಷ್ಟ್ರೀಯ ಸುದ್ದಿ

ಅದಾನಿ ಯೋಜನೆಗಳಿಗಾಗಿ 83,700 ಚದರ ಅಡಿ ಅರಣ್ಯ ಮತ್ತು ಮ್ಯಾಂಗ್ರೋವ್ ಭೂಮಿಯನ್ನು ಬಿಟ್ಟುಕೊಡಲು ಮಹಾರಾಷ್ಟ್ರ ಸರ್ಕಾರದ ಅನುಮೋದನೆ

ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ

ರಾಷ್ಟ್ರೀಯ ಸುದ್ದಿ

ಹಿಜಾಬ್ ಇಸ್ಲಾಂನ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ: ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಜ್ಯ ಸುದ್ದಿ

ರಿಕ್ಷಾ ಚಾಲಕ ಗುರುಪ್ರಸಾದ್‌ ಹೃದಯಾಘಾತದಿಂದ ನಿಧನ: ಮೃತರಿಗೆ ಗೌರವಾರ್ಥ ಮಿಲಾದ್ ಕಾರ್ಯಕ್ರಮ ಮುಂದೂಡಿದ ಮಸೀದಿ ಆಡಳಿತ

ರಾಷ್ಟ್ರೀಯ ಸುದ್ದಿ

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ