ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

Reading…
Follow Us

ಸಾರಾಂಶ

ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆಯ ಹಾದಿ ಕುರಿತು ಇನ್‌ಸ್ಪೆಕ್ಟರ್ ಧನಂಜಯ್ ನೀಡಿರುವ ಎಚ್ಚರಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ಷೇಪ ಎತ್ತಿದ್ದಾರೆ. "ಮಸೀದಿ ಎದುರು ಡ್ಯಾನ್ಸ್ ಮಾಡಿದರೆ ಏನಾಗುತ್ತದೆ?" ಎಂದು ಪ್ರಶ್ನಿಸಿರುವ ಅವರು, ಪೋಲಿಸ್ ಅಧಿಕಾರಿ ಯುವಕರಿಗೆ ಹೆದರಿಸಿದರೆ ನೇರವಾಗಿ ಠಾಣೆಗೆ ನುಗ್ಗುವುದಾಗಿ ಎಚ್ಚರಿಸಿದ್ದಾರೆ.

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಯ ಹಾದಿ ಕುರಿತು ಸ್ಥಳೀಯ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ನೀಡಿರುವ ಮುಂಜಾಗ್ರತಾ ಸೂಚನೆಗಳಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಕಠಿಣ ಭಾಷೆಯಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಾಂತಿ ಸಭೆಯಲ್ಲಿ ಇನ್‌ಸ್ಪೆಕ್ಟರ್ ಅವರು “ಮಸೀದಿ ಮುಂಭಾಗ ಮೆರವಣಿಗೆ ನಿಲ್ಲಿಸಿ ಪಟಾಕಿ ಹೊಡೆಯುವುದು ಅಥವಾ ಗಲಾಟೆ ಮಾಡಿದರೆ ಗ್ರಾಚಾರ ಬಿಡಿಸುತ್ತೇನೆ” ಎಂದು ನೀಡಿದ್ದ ಎಚ್ಚರಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಮಾಜಿ ಸಂಸದರು ಆ ರೀತಿಯ ಧಾಟಿಯನ್ನು ಬಹಿರಂಗವಾಗಿ ಪ್ರಶ್ನಿಸಿದ್ದಾರೆ. ಅಸಹಾಯಕ ಯುವಕರ ಮುಂದೆ ಬ್ರಿಟಿಷರ ಕಾಲದ ದರ್ಪ ತೋರಿಸುವುದು ಬಿಟ್ಟು, ಧೈರ್ಯವಿದ್ದರೆ ತಮ್ಮ ಎದುರು ಪೌರುಷ ತೋರಿಸಲಿ ಎಂದು ಅವರು ಪೋಲಿಸ್ ಅಧಿಕಾರಿಗೆ ಸವಾಲೆಸೆದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, “ಮಸೀದಿ ಎದುರುಗಡೆ ಯುವಕರು ಡ್ಯಾನ್ಸ್ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ಏನಾಗುತ್ತದೆ?” ಎಂದು ನೇರವಾಗಿ ಕೇಳಿದ್ದಾರೆ . ಸಾರ್ವಜನಿಕವಾಗಿ ದಿನಕ್ಕೆ ಐದು ಬಾರಿ ಮೈಕ್ ಬಳಸಿ ಪ್ರಾರ್ಥನೆ ಕೂಗುವಾಗ ಜಾರಿಯಾಗದ ಕಾನೂನು ಮತ್ತು ನಿಯಮಗಳು, ಹಿಂದೂಗಳ ಗಣೇಶೋತ್ಸವ ಬಂದಾಗ ಮಾತ್ರ ಏಕ ಪ್ರಮಾಣದಲ್ಲಿ ಜಾರಿಯಾಗುತ್ತವೆ ಎಂದು ಅವರು ಆರೋಪಿಸಿದ್ದಾರೆ. ಇನ್ಸ್‌ಪೆಕ್ಟರ್ ಅವರು ಮತ್ತೆ ಯುವಕರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡಿದರೆ, ತಾವು ಸ್ವತಃ ನೇರವಾಗಿ ಪೊಲೀಸ್ ಠಾಣೆಗೆ ನುಗ್ಗುವುದಾಗಿ ಎಚ್ಚರಿಕೆ ನೀಡಿದ್ದು, ಸ್ಥಳೀಯ ಪೋಲಿಸ್ ಇಲಾಖೆ ಹಾಗೂ ರಾಜಕೀಯ ವಲಯದಲ್ಲಿ ಈ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ.

ವರ್ಷಂಪ್ರತಿ ಸಾರ್ವಜನಿಕ ಉತ್ಸವಗಳ ಸಂದರ್ಭದಲ್ಲಿ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ಪೋಲಿಸ್ ಇಲಾಖೆಯು ಮೆರವಣಿಗೆಗಳಿಗೆ ಮಾರ್ಗಸೂಚಿಗಳನ್ನು ನಿಗದಿಪಡಿಸುವುದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಿದೆ. ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಅವರು ಕೂಡ ಶಾಂತಿ ಸಭೆಯಲ್ಲಿ ಮಾತನಾಡಿ, “ಹಬ್ಬದ ಹೆಸರಿನಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಅನಗತ್ಯ ಗಲಾಟೆ ಎಬ್ಬಿಸುವುದು ಅಥವಾ ಮಸೀದಿಗಳ ಮುಂದೆ ಪಟಾಕಿ ಹೊಡೆದು ಪ್ರಚೋದನೆ ನೀಡುವುದನ್ನು ಸಹಿಸುವುದಿಲ್ಲ” ಎಂದು ಸಂಘಟಕರಿಗೆ ಸ್ಪಷ್ಟ ಸೂಚನೆ ನೀಡಿದ್ದರು.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಜ್ಯ ಸುದ್ದಿ

5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

From Across Varadigara

ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ

ರಾಷ್ಟ್ರೀಯ ಸುದ್ದಿ

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!

ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ರಾಷ್ಟ್ರೀಯ ಸುದ್ದಿ

“ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನನಗೇ ಈ ಸ್ಥಿತಿಯಾದರೆ ಸಾಮಾನ್ಯರ ಕಥೆಯೇನು?”: ಪಂಜಾಬ್‌ SIR ಗೊಂದಲ; ಮಾಜಿ ರಾಯಭಾರಿಗೇ ಪೌರತ್ವ ಸಾಬೀತುಪಡಿಸುವ ಸ್ಥಿತಿ

ರಾಷ್ಟ್ರೀಯ ಸುದ್ದಿ

ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು

ರಾಜ್ಯ ಸುದ್ದಿ

5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಷ್ಟ್ರೀಯ ಸುದ್ದಿ

“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ

ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

ರಾಷ್ಟ್ರೀಯ ಸುದ್ದಿ

ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಘೋಷಿಸಿದ ಸಿಜೆಪಿ

ಸುತ್ತ - ಮುತ್ತ

Coastal Friends Mangaloreಗೆ ನೂತನ ಸಾರಥ್ಯ: ಅಧ್ಯಕ್ಷರಾಗಿ ಶಮೀರ್ ಲಕ್ಕಿಸ್ಟಾರ್ ಆಯ್ಕೆ

ಸುದ್ದಿ

NRIಗಳಿಗೆ ಪ್ರತ್ಯೇಕ ಇಲಾಖೆ: ಕರ್ನಾಟಕ ಸಚಿವ ಸಂಪುಟದಿಂದ ಮಹತ್ವದ ಅನುಮೋದನೆ

ರಾಷ್ಟ್ರೀಯ ಸುದ್ದಿ

ಹಿಜಾಬ್ ಇಸ್ಲಾಂನ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ: ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ರಾಜ್ಯ ಸುದ್ದಿ

ಮಂಗಳೂರು ರೈಲ್ವೆ ವ್ಯಾಪ್ತಿ ವರ್ಗಾವಣೆ: ತೀರ್ಮಾನ ತಡೆಹಿಡಿಯಲು ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ಕೇರಳ ಸಿಎಂ ವಿ. ಡಿ. ಸತೀಶನ್

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ರಾಷ್ಟ್ರೀಯ ಸುದ್ದಿ

ಜಾಗತಿಕ ಹೂಡಿಕೆದಾರರಿಗೆ ಏಷ್ಯಾದಲ್ಲೇ ಅತ್ಯಂತ ಕನಿಷ್ಠ ಆದ್ಯತೆಯಾಗಿ ಭಾರತೀಯ ಷೇರು ಮಾರುಕಟ್ಟೆ: ಬ್ಯಾಂಕ್ ಆಫ್ ಅಮೆರಿಕ ಸಮೀಕ್ಷೆಯಲ್ಲಿ ಕಳವಳಕಾರಿ ಮಾಹಿತಿ ಬಹಿರಂಗ