ಬೆಂಗಳೂರು: ಬಸವನಗುಡಿಯ ಕೆ.ಆರ್. ರಸ್ತೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನೆ ನೀಡಿದ ಆರೋಪದ ಮೇರೆಗೆ ರೌಡಿಶೀಟರ್ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬುಧವಾರ ಮಧ್ಯಾಹ್ನ ಈದ್ ಮೆರವಣಿಗೆ ಸಾಗುತ್ತಿದ್ದ ವೇಳೆ ಪುನೀತ್ ಬೆಂಬಲಿಗರು ಹಾಗೂ ಅನ್ಯ ಸಮುದಾಯದವರ ನಡುವೆ ಜಗಳ ಆರಂಭವಾಗಿತ್ತು. ಈ ವೇಳೆ ಪುನೀತ್‌ನ ಸಹಚರ ಮುರಳಿ ಎಂಬಾತನ ತಲೆಗೆ ಗಾಯವಾಗಿದ್ದು, ಕೆಲವೇ ನಿಮಿಷಗಳಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಎರಡೂ ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು.
ಘಟನೆಗೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ, ವಿನೋದ್ ನಾಯಕ್, ಪುನೀತ್ ಗೌಡ, ಗೋಪಿ ಗೌಡ ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿದೆ. ಇವರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು
ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ
ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ
ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626ಕ್ಕೆ ಏರಿಕೆ; 2,478 ಮಂದಿ ನಾಪತ್ತೆ
CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ
ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ
ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ಇದ್ದು, ಆತನ ವಿರುದ್ಧ ಹಲವು ಅಪರಾಧ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಪ್ರಚೋದನೆಗೆ ಸಂಬಂಧಿಸಿದ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ.
ದಕ್ಷಿಣ ವಿಭಾಗದ ಡಿಸಿಪಿ ಕೋನ ವಂಶಿಕೃಷ್ಣ ಅವರು, ಸಾರ್ವಜನಿಕರು ಯಾವುದೇ ಪ್ರಚೋದನಕಾರಿ ಚಟುವಟಿಕೆಗಳಿಗೆ ಒಳಗಾಗದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು. ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಮನವಿ ಮಾಡಿದ್ದಾರೆ.
