ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

Reading…
Follow Us

ಸಾರಾಂಶ

ಗರ್ಬಾ ಉತ್ಸವಕ್ಕೆ ಮುಸ್ಲಿಂ ಯುವಕರು ಬರುವುದಿದ್ದರೆ ತಮ್ಮ ಅಕ್ಕ-ತಂಗಿಯರನ್ನೂ ಕರೆತರಲಿ, ‘ನಮ್ಮ ಹುಡುಗರೂ ಸಿದ್ಧರಿದ್ದಾರೆ’ ಎಂಬ ಭೋಪಾಲ್ ಬಿಜೆಪಿ ಶಾಸಕ ರಮೇಶ್ವರ ಶರ್ಮಾ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ. ಈ ವೀಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಸಾರ್ವಜನಿಕರು ಹಾಗೂ ನೆಟಿಜನ್‌ಗಳು ಶಾಸಕರ ಪ್ರಚೋದನಾತ್ಮಕ ಭಾಷೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಆಚರಣೆ ನೆಪದಲ್ಲಿ ಶಾಸಕರು ಕೋಮು ಭಾವನೆ ಕೆರಳಿಸುತ್ತಿದ್ದಾರೆ ಎಂದು ವಿಪಕ್ಷ ಕಾಂಗ್ರೆಸ್ ಮತ್ತು ಎಐಎಂಐಎಮ್ ನಾಯಕರು ಟೀಕಿಸಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ನ ಹುಜೂರ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ವರ್ ಶರ್ಮಾ, ನವರಾತ್ರಿ ಗರ್ಬಾ ಉತ್ಸವದಲ್ಲಿ ಮುಸ್ಲಿಂ ಯುವಕರ ಭಾಗವಹಿಸುವಿಕೆ ಕುರಿತು ನೀಡಿರುವ ಸಾರ್ವಜನಿಕ ಹೇಳಿಕೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಶರ್ಮಾ, “ಮುಸ್ಲಿಂ ಯುವಕರು ಗರ್ಬಾಗೆ ಬರುವುದಿದ್ದರೆ ಒಬ್ಬರೇ ಬರಬಾರದು, ತಮ್ಮ ಅಕ್ಕ-ತಂಗಿಯರು ಮತ್ತು ಹೆಣ್ಣುಮಕ್ಕಳನ್ನೂ ಕರೆದುಕೊಂಡು ಬರಬೇಕು. ನಮ್ಮ ಹುಡುಗರೂ ಸಿದ್ಧರಿದ್ದಾರೆ. ಸನಾತನ ಧರ್ಮದ ಮೇಲೆ ಪ್ರೀತಿ ಇದ್ದರೆ ಪೂರ್ಣವಾಗಿ ಬಂದು, ತಿಲಕವಿಟ್ಟು ‘ಜೈ ಶ್ರೀರಾಮ್’ ಘೋಷಣೆ ಕೂಗಲಿ” ಎಂದು ಹೇಳಿದ್ದಾರೆ. ಈ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ.  

ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಅದನ್ನು ಸಮರ್ಥಿಸಿಕೊಂಡಿರುವ ರಮೇಶ್ವರ್ ಶರ್ಮಾ, “ಗರ್ಬಾ ಎಂಬುದು ಬರಿ ಮನರಂಜನೆಯಲ್ಲ, ಅದು ಜಗದಂಬಾ ದೇವಿಯ ಆರಾಧನೆ. ಸನಾತನ ಧರ್ಮದ ಬಗ್ಗೆ ಮುಸ್ಲಿಮರಿಗೆ ಅಷ್ಟು ಒಲವಿದ್ದರೆ ಬರಿ ಗಂಡುಮಕ್ಕಳು ನೋಡುವುದಕ್ಕೆ ಮಾತ್ರ ಬರಬಾರದು, ಇಡೀ ಕುಟುಂಬದೊಂದಿಗೆ ಬಂದು ದೇವಿಯ ಪ್ರಸಾದ ಸ್ವೀಕರಿಸಲಿ” ಎಂದು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಮಧ್ಯಪ್ರದೇಶದಲ್ಲಿ ಪ್ರತಿವರ್ಷ ನವರಾತ್ರಿ ಆಚರಣೆ ವೇಳೆ ಗರ್ಬಾ ಪಂದಾಲ್‌ಗಳ ಪ್ರವೇಶದ್ವಾರದಲ್ಲಿ ಧರ್ಮ ಆಧಾರಿತ ತಪಾಸಣೆ, ಆಧಾರ್ ಕಾರ್ಡ್ ಪರಿಶೀಲನೆ ಹಾಗೂ ಪಂಚಗವ್ಯ ನೀಡುವಂತಹ ನಿರ್ಧಾರಗಳು ವರದಿಯಾಗುತ್ತಿದ್ದು, ಶಾಸಕರ ಈ ಹೇಳಿಕೆ ಆ ವಿವಾದವನ್ನು ಮತ್ತಷ್ಟು ಕಾಯಿಸಿದೆ.  

ಶಾಸಕರ ಈ ಮಾತುಗಳ ವಿರುದ್ಧ ವಿಪಕ್ಷಗಳ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭೋಪಾಲ್ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಮಾತನಾಡಿ, “ಶಾಸಕರು ಸಮಾಜದಲ್ಲಿ ಕೋಮು ಭಾವನೆಗಳನ್ನು ಕೆರಳಿಸಲು ಹಾಗೂ ಧ್ರುವೀಕರಣ ಮಾಡಲು ಇಂತಹ ಕೆಳಮಟ್ಟದ ಭಾಷೆ ಬಳಸುತ್ತಿದ್ದಾರೆ. ಅವರು ತಕ್ಷಣ ತಮ್ಮ ಮಾತುಗಳನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದ್ದಾರೆ. ಎಐಎಂಐಎಮ್ (AIMIM) ಮಧ್ಯಪ್ರದೇಶ ಘಟಕದ ಅಧ್ಯಕ್ಷ ಮೊಹಸಿನ್ ಅಲಿ ಖಾನ್, “ಸಂವಿಧಾನದ ವಿಧಿ 25 ಪ್ರತಿಯೊಬ್ಬ ನಾಗರಿಕನಿಗೂ ತಮಗಿಷ್ಟವಾದ ಧರ್ಮವನ್ನು ಆಚರಿಸುವ ಹಕ್ಕು ನೀಡಿದೆ. ಶಾಸಕರು ಸಮಾಜವನ್ನು ಒಡೆಯುವ ಮಾತುಗಳನ್ನಾಡುವ ಮೊದಲು ಸಂವಿಧಾನವನ್ನು ಸರಿಯಾಗಿ ಓದಿಕೊಳ್ಳಬೇಕು” ಎಂದು ಟೀಕಿಸಿದ್ದಾರೆ. 

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 
ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?
ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

From Across Varadigara

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ರಾಜ್ಯ ಸುದ್ದಿ

5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ರಾಜ್ಯ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!

ಅಂತಾರಾಷ್ಟ್ರೀಯ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626ಕ್ಕೆ ಏರಿಕೆ; 2,478 ಮಂದಿ ನಾಪತ್ತೆ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಘೋಷಿಸಿದ ಸಿಜೆಪಿ

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ಅಂತಾರಾಷ್ಟ್ರೀಯ

“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ರಾಷ್ಟ್ರೀಯ ಸುದ್ದಿ

“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ