ರಾಜ್ಯ ಸುದ್ದಿ

“ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು” : ಸಿದ್ದರಾಮಯ್ಯ

Reading…
Follow Us

ಸಾರಾಂಶ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದು, "ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು" ಎಂದು ಘೋಷಿಸಿದ್ದಾರೆ. ತಮ್ಮ 48 ವರ್ಷಗಳ ರಾಜಕೀಯ ಪಯಣದ ತೃಪ್ತಿಯನ್ನು ಹಂಚಿಕೊಂಡಿರುವ ಅವರು, ಈ ನಿರ್ಧಾರ ಕೇವಲ ಹುದ್ದೆಗೆ ಮಾತ್ರ ಸೀಮಿತವಾಗಿದ್ದು, ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಕೋಮುವಾದಿ ಶಕ್ತಿಗಳ ವಿರುದ್ಧ ಕೊನೆಯವರೆಗೂ ಹೋರಾಡುವುದಾಗಿ ಸ್ಪಷ್ಟಪಡಿಸಿದ್ದಾರೆ.

ಹುದ್ದೆ ತೊರೆದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌; ಕೊನೆಯುಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟದ ಪಣ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಮಾಧ್ಯಮಗಳಲ್ಲಿ ಅವರ ರಾಜೀನಾಮೆಯ ಸುದ್ದಿ ಪ್ರಮುಖವಾಗಿ ಬಿತ್ತರವಾಗುತ್ತಿರುವ ಬೆನ್ನಲ್ಲೇ, ತಮ್ಮ ರಾಜಕೀಯ ಸಿದ್ಧಾಂತ ಮತ್ತು ಕೃತಜ್ಞತೆಯ ಸಾಲುಗಳನ್ನು ಹಂಚಿಕೊಂಡಿರುವ ಅವರು, “ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು” ಎಂದು ಘೋಷಿಸಿದ್ದಾರೆ. ಈ ಮೂಲಕ ತಮಗೆ ಅಧಿಕಾರಕ್ಕಿಂತ ಸಿದ್ಧಾಂತವೇ ಮುಖ್ಯ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಸುದೀರ್ಘ ರಾಜಕೀಯ ಪಯಣದ ಹಾದಿಯನ್ನು ಮೆಲುಕು ಹಾಕಿರುವ ಅವರು, ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದ ತಮಗೆ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ ಮತ್ತು ಎರಡೆರಡು ಬಾರಿ ಮುಖ್ಯಮಂತ್ರಿಯಾಗುವ ಅತಿ ದೊಡ್ಡ ಅವಕಾಶ ಸಿಗುತ್ತದೆ ಎಂದು ತಾವು ಎಂದಿಗೂ ಭಾವಿಸಿರಲಿಲ್ಲ ಎಂದಿದ್ದಾರೆ. ಇಂತಹ ದುಬಾರಿಯಾದ ಕನಸು ನನಸಾಗಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನವೇ ಕಾರಣ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಬುದ್ಧ, ಬಸವ, ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಸಿದ್ಧಾಂತಗಳೇ ತಮ್ಮ ಜೀವನದ ಆದರ್ಶವಾಗಿದ್ದು, ಕಳೆದ 48 ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಶೋಷಿತರು, ಬಡವರು ಹಾಗೂ ಅವಕಾಶ ವಂಚಿತರ ಪರವಾಗಿ ಯಾವುದೇ ರಾಜಿ ಇಲ್ಲದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ತಮಗಿದೆ ಎಂದು ಹೇಳಿಕೊಂಡಿದ್ದಾರೆ.

ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ತಮ್ಮ ವಿರೋಧಿಗಳಿಗೂ ಕಡಕ್ ಸಂದೇಶ ರವಾನಿಸಿರುವ ಸಿದ್ದರಾಮಯ್ಯ, ತಮ್ಮ ಈ ನಿರ್ಧಾರ ಕೇವಲ ಮುಖ್ಯಮಂತ್ರಿ ಹುದ್ದೆಗೆ ಮಾತ್ರ ಸೀಮಿತವಾಗಿದ್ದು, ಸಕ್ರಿಯ ರಾಜಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಜೀವದ ಕೊನೆಯುಸಿರು ಇರುವವರೆಗೂ ಸಾಮಾಜಿಕ ನ್ಯಾಯದ ರಕ್ಷಣೆಗಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ರಾಜಿಯಿಲ್ಲದ ಹೋರಾಟವನ್ನು ಮುಂದುವರಿಸುವುದಾಗಿ ಪಣ ತೊಟ್ಟಿದ್ದಾರೆ. ತಮ್ಮ ಈ ಸುದೀರ್ಘ ಪಯಣದಲ್ಲಿ ಹೆಗಲಿಗೆ ಹೆಗಲು ಕೊಟ್ಟು ನಡೆಸಿದ ಕನ್ನಡಿಗರು, ಶಾಸಕರು, ಸಂಪುಟ ಸಹೋದ್ಯೋಗಿಗಳು ಮತ್ತು ಪಕ್ಷದ ಹೈಕಮಾಂಡ್ ನಾಯಕರಿಗೆ ಧನ್ಯವಾದ ಅರ್ಪಿಸುವ ಮೂಲಕ ಮಾಧ್ಯಮಗಳ ರಾಜಕೀಯ ಚರ್ಚೆಗಳ ನಡುವೆಯೂ ಸಿದ್ದರಾಮಯ್ಯ ತಮ್ಮ ಸಿದ್ಧಾಂತದ ಬದ್ಧತೆಯನ್ನು ಸಾರಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ಸುದ್ದಿ

NRIಗಳಿಗೆ ಪ್ರತ್ಯೇಕ ಇಲಾಖೆ: ಕರ್ನಾಟಕ ಸಚಿವ ಸಂಪುಟದಿಂದ ಮಹತ್ವದ ಅನುಮೋದನೆ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

From Across Varadigara

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ

ಸಾಮಾಜಿಕ ತಾಣ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ರಾಜ್ಯ ಸುದ್ದಿ

5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ