ದೇಶದ ಭದ್ರತೆ, ಏಕತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಯತ್ನಿಸುತ್ತಿದ್ದ ಗೂಢಚಾರಿಕೆ ಜಾಲವೊಂದನ್ನು ರಾಜಸ್ಥಾನದ ಶ್ರೀ ಗಂಗಾನಗರ ಪೊಲೀಸರು ಹಾಗೂ ಸಿಐಡಿ ಗುಪ್ತಚರ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಪಾಕಿಸ್ತಾನ ಮೂಲದ ಐಎಸ್‌ಐ (ISI) ನಿರ್ವಹಕರ (Handlers) ಜೊತೆ ನಿಕಟ ಸಂಪರ್ಕ ಹೊಂದಿದ್ದ 45 ವರ್ಷದ ಬಲ್ವಿಂದರ್ ಸಿಂಗ್ ಅಲಿಯಾಸ್ ಬಿಂದ್ರಾ ಎಂಬಾತನನ್ನು ಗಡಿ ಜಿಲ್ಲೆಯ ಅನೂಪ್‌ಗಢದಲ್ಲಿ ಬಂಧಿಸಲಾಗಿದೆ.
ರಾಜಸ್ಥಾನದ ಗಡಿ ಭಾಗದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬಲ್ವಿಂದರ್ ಸಿಂಗ್ ಮೇಲೆ ಗುಪ್ತಚರ ಇಲಾಖೆ ಹಾಗೂ ಪೊಲೀಸರು ನಿರಂತರ ನಿಗಾ ಇರಿಸಿದ್ದರು. ತನಿಖೆಯ ವೇಳೆ, ಈತ ಸ್ಥಳೀಯವಾಗಿ ಸಂಗ್ರಹಿಸಿದ ಎಂಟು ಭಾರತೀಯ ಸಿಮ್ ಕಾರ್ಡ್‌ಗಳನ್ನು ಪಾಕಿಸ್ತಾನದಲ್ಲಿದ್ದ ಐಎಸ್‌ಐ ಏಜೆಂಟರಿಗೆ ತಲುಪಿಸಿರುವುದು ಬೆಳಕಿಗೆ ಬಂದಿದೆ. ಈ ನಂಬರ್‌ಗಳಿಗೆ ಬರುವ ಒಟಿಪಿ (OTP) ಮೂಲಕ ಪಾಕಿಸ್ತಾನದಲ್ಲೇ ಕುಳಿತು ವಾಟ್ಸಾಪ್ ಖಾತೆಗಳನ್ನು ಸಕ್ರಿಯಗೊಳಿಸಲಾಗುತ್ತಿತ್ತು. ನಂತರ ಆ ಭಾರತೀಯ ನಂಬರ್‌ಗಳ ವಾಟ್ಸಾಪ್ ಮೂಲಕ ಪಾಕಿಸ್ತಾನದ ಏಜೆಂಟರು ಭಾರತದಲ್ಲಿರುವ ವ್ಯಕ್ತಿಗಳನ್ನು ಸಂಪರ್ಕಿಸಿ, ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಸಂಗ್ರಹಿಸಲು ಯತ್ನಿಸುತ್ತಿದ್ದರು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
ಇದಷ್ಟೇ ಅಲ್ಲದೆ, ಬಂಧಿತ ಆರೋಪಿ ಬಲ್ವಿಂದರ್ ಸಿಂಗ್ ಸ್ವತಃ ಕಳೆದೆರಡು ತಿಂಗಳುಗಳಿಂದ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಹಾಗೂ ಗೌಪ್ಯ ಮಾಹಿತಿಗಳನ್ನು ಗಡಿಯಾಚೆಗೆ ರವಾನಿಸಲು ಯತ್ನಿಸುತ್ತಿದ್ದ ಎಂಬ ಅಂಶವೂ ತನಿಖೆಯಲ್ಲಿ ತಿಳಿದುಬಂದಿದೆ. ಈತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ನಿಯಮಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯ ಮೊಬೈಲ್ ಫೋನ್ ಅನ್ನು ವಿಧಿವಿಜ್ಞಾನ (ಫೋರೆನ್ಸಿಕ್) ತನಿಖೆಗೆ ಒಳಪಡಿಸಲಾಗಿದ್ದು, ಈತ ಪಾಕಿಸ್ತಾನಿ ಏಜೆಂಟರೊಂದಿಗೆ ವಾಟ್ಸಾಪ್ ಮೂಲಕ ನಿರಂತರ ಸಂಪರ್ಕದಲ್ಲಿದ್ದುದು ಖಚಿತವಾಗಿದೆ.
ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ
ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ
ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ
ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ
ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ
ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626ಕ್ಕೆ ಏರಿಕೆ; 2,478 ಮಂದಿ ನಾಪತ್ತೆ
“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ
ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ಮತ್ತೊಂದೆಡೆ, ಈತ ಗಡಿಯಾಚಿನ ಮಾದಕದ್ರವ್ಯ ಕಳ್ಳಸಾಗಣೆಯಲ್ಲೂ ಸಕ್ರಿಯನಾಗಿದ್ದ ಎಂಬುದು ಗೊತ್ತಾಗಿದೆ. ಜೈತ್‌ಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡ್ರೋನ್ ಮೂಲಕ ಪಾಕಿಸ್ತಾನದಿಂದ ಭಾರತಕ್ಕೆ ಪೂರೈಕೆಯಾಗಿದ್ದ ಸುಮಾರು 55 ಕೋಟಿ ರೂಪಾಯಿ ಮೌಲ್ಯದ 10.5 ಕೆಜಿ ಹೆರಾಯಿನ್ ವಶಪಡಿಸಿಕೊಂಡ ಪ್ರಕರಣದಲ್ಲೂ ಈತ ಪ್ರಮುಖ ಆರೋಪಿಯಾಗಿದ್ದ. ಈತನ ಬಂಧನಕ್ಕೆ ಪೊಲೀಸರು 25,000 ರೂಪಾಯಿ ಬಹುಮಾನವನ್ನೂ ಘೋಷಿಸಿದ್ದರು. ಪ್ರಸ್ತುತ ಪೊಲೀಸರು ಈ ಗೂಢಚಾರಿಕೆ ಮತ್ತು ಮಾದಕದ್ರವ್ಯ ಜಾಲದ ನಡುವಿನ ಲಿಂಕ್‌ಗಳನ್ನು ಭೇದಿಸಲು ಆರೋಪಿಯನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ.
