ನವದೆಹಲಿ, ಮೇ 19: 2020ರ ದಿಲ್ಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಸಲ್ಲಿಸಿದ್ದ 15 ದಿನಗಳ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.
ಇತ್ತೀಚೆಗೆ ನಿಧನರಾದ ತಮ್ಮ ಮಾವನ 40ನೇ ದಿನದ ಧಾರ್ಮಿಕ ವಿಧಿವಿಧಾನಗಳಾದ ‘ಚೆಹ್ಲುಮ್’ನಲ್ಲಿ ಭಾಗವಹಿಸಲು ಹಾಗೂ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ತಮ್ಮ ತಾಯಿಯ ಆರೈಕೆಗೆ ಅವಕಾಶ ನೀಡುವಂತೆ ಉಮರ್ ಖಾಲಿದ್ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿನ್ನೆಲೆ 15 ದಿನಗಳ ಮಧ್ಯಂತರ ಜಾಮೀನು ನೀಡುವಂತೆ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೈ ಅವರು ಜಾಮೀನು ನೀಡಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿದರು. ನ್ಯಾಯಾಲಯದ ಆದೇಶದ ವಿವರಗಳು ಇನ್ನೂ ಸಂಪೂರ್ಣವಾಗಿ ಬಹಿರಂಗವಾಗಿಲ್ಲ.
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
ಅವರನ್ನು 2020ರ ಸೆಪ್ಟೆಂಬರ್‌ನಲ್ಲಿ ದಿಲ್ಲಿ ಗಲಭೆ ಸಂಚು ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (UAPA) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ದೀರ್ಘಕಾಲದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
2020ರ ಫೆಬ್ರುವರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (NRC) ವಿರುದ್ಧ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ದಿಲ್ಲಿಯ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿತ್ತು. ಈ ಗಲಭೆಗಳಲ್ಲಿ 53 ಮಂದಿ ಸಾವನ್ನಪ್ಪಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಹಲವು ರಾಜಕೀಯ ಕಾರ್ಯಕರ್ತರು, ವಿದ್ಯಾರ್ಥಿ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.
ಉಮರ್ ಖಾಲಿದ್ ಪರ ವಕೀಲರು ಮಾನವೀಯ ಕಾರಣಗಳನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನು ಕೋರಿ ವಾದ ಮಂಡಿಸಿದ್ದರೆ, ತನಿಖಾ ಸಂಸ್ಥೆಗಳು ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಬಳಿಕ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ.

